ಬಳ್ಳಾರಿ: ರೈತ ವಿರೋಧಿ ಭೂಸುಧಾರಣಾ ಕಾಯ್ದೆ ಕೈಬಿಡಬೇಕು, ಇದರಿಂದಾಗಿ ಸಣ್ಣಪುಟ್ಟ ರೈತರು ಬೀದಿಗೆ ಬರುವಂತಾಗುತ್ತದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ ಒತ್ತಾಯಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಎ.ಮಾನಯ್ಯ, ದೇವರಾಜು ಅರಸು ಅವಧಿಯ 1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದರು. ಇದರಿಂದಾಗಿ ಸಣ್ಣಪುಟ್ಟ ರೈತರು ಮತ್ತು ಮಧ್ಯಮ ವರ್ಗದ ರೈತರು ಬೀದಿಗೆ ಬೀಳುವ ಪರಿಸ್ಥಿತಿ ಉಂಟಾಗುತ್ತಿದೆ ಎಂದರು.
ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಈ ಸಮಯದಲ್ಲಿ ಹೆಚ್ ಬಿ ಗಂಗಣ್ಣ, ಬಿ ಮರಿಸ್ಚಾಮಿ, ಜಿ.ಪಂಪಾಪತಿ, ಹೆಚ್ ಅಂಜಿನಿ, ಕೆ.ಗಾದಿಲಿಂಗ, ಎ ಕೆ ನಿಂಗಪ್ಪ, ಹೆಚ್ ನಾಗೇಂದ್ರಪ್ಪ ಹಾಗೂ ಇನ್ನಿತರರು ಹಾಜರಿದ್ದರು.