ಬಳ್ಳಾರಿ: ಪುಲ್ವಾಮಾ ದಾಳಿಯಲ್ಲಿ ವೀರಮರಣ ಹೊಂದಿದ ಸೈನಿಕರ ಕುಟುಂಬಕ್ಕೆ ಬಳ್ಳಾರಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ 16,422 ರೂ. ಡಿಡಿ ನೀಡಲಾಯಿತು.
ಸಂಘದಿಂದ ಡಿಡಿಯನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.
ಈ ಸಮಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್, ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಹಾಜರಿದ್ದರು.