ಬಳ್ಳಾರಿ: ಗಣಿನಾಡಿನ ನಿವೃತ್ತ ಹಿರಿಯ ಪತ್ರಕರ್ತ ಶ್ಯಾಮಸುಂದರ್ (68) ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಗರದ ಬಿಕೆಎಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪುತ್ರ, ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ. ಕೆಹೆಚ್ಬಿ ಕಾಲೋನಿಯ ನಿವಾಸಿಯಾಗಿದ್ದ ಹಿರಿಯ ಪತ್ರಕರ್ತ ಶಾಮಸುಂದರ್, ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬಿಕೆಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಅವರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.