ETV Bharat / state

ಬಳ್ಳಾರಿ: ಸಾಲಬಾಧೆಯಿಂದ ರಸ್ತೆ ಪಕ್ಕದಲ್ಲೇ ವಿಷ ಸೇವಿಸಿ ನಿವೃತ್ತ ಶಿಕ್ಷಕ ಆತ್ಮಹತ್ಯೆ - ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ ಗ್ರಾಮ

ಸಾಲಬಾಧೆಯಿಂದ ನಿವೃತ್ತ ಶಿಕ್ಷಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ.

retired-teacher-commits-suicide-in-ballari
ಬಳ್ಳಾರಿ: ಸಾಲಬಾಧೆಯಿಂದ ರಸ್ತೆ ಬದಿಯಲ್ಲೇ ವಿಷ ಸೇವಿಸಿ ನಿವೃತ್ತ ಶಿಕ್ಷಕ ಆತ್ಮಹತ್ಯೆ
author img

By

Published : Nov 26, 2022, 4:21 PM IST

ವಿಜಯನಗರ: ಸಾಲಬಾಧೆಯಿಂದ ನಿವೃತ್ತ ಶಿಕ್ಷಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಶನಿವಾರ ನಡೆದಿದೆ. ಬಿ.ಆರ್. ಕೊಟ್ರಗೌಡ ಎಂಬುವರೇ ಆತ್ಮಹತ್ಯೆ ಮಾಡಿಕೊಂಡವರು.

ಮರಿಯಮ್ಮನಹಳ್ಳಿ ತಾಂಡದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದ ಕೊಟ್ರಗೌಡ ಸಾಲಬಾಧೆಯಿಂದ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು. ಹಗರಿಬೊಮ್ಮನಹಳ್ಳಿ ಪಟ್ಟಣದ ಹೊರವಲಯದ ಕೆಚ್ಚಿನಬಂಡಿ ರಸ್ತೆ ಪಕ್ಕದಲ್ಲೇ ಯಾರು ಇಲ್ಲದ ಸಮಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಆರು ತಿಂಗಳ ಹಿಂದೆಯೇ ಕೊಟ್ರಗೌಡ ಶಿಕ್ಷಕ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲಿ ಡೆತ್​​ನೋಟ್ ಪತ್ತೆಯಾಗಿದೆ. ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ, ನನ್ನ ಸಂಸಾರವನ್ನು ಭಗವಂತ ಕಾಪಾಡಲಿ ಅಂತ ಅವರು ಡೆತ್​​ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅತ್ಯಾಚಾರ ಯತ್ನ: ದೊಡ್ಡಬಳ್ಳಾಪುರದಲ್ಲಿ ವಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ಪೈಶಾಚಿಕ ಕೃತ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.