ಬಳ್ಳಾರಿ : ಜಿಲ್ಲೆಯ ಸಿರುಗುಪ್ಪ ಪಟ್ಟಣದ ಸದಾಶಿವನಗರದಲ್ಲಿ ಕಂದಾಯ ಅಧಿಕಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚೈತ್ರಾ (25) ಮೃತ ಕಂದಾಯ ಅಧಿಕಾರಿ.
ಚೈತ್ರಾ ಅವರು ಕೊಪ್ಪಳ ನಗರಸಭೆಯಲ್ಲಿ ಕಂದಾಯ ನಿರೀಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಿರುಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.