ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 150 (ಎ) ರಸ್ತೆಯಲ್ಲಿ ಬೈಕ್ - ಕಾರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದಾನೆ.
ಶರೀಫ್ ಸಾಬ್ (65) ಮೃತ ವ್ಯಕ್ತಿ. ಸಿರುಗುಪ್ಪ ಪಟ್ಟಣದಿಂದ ತೆಕ್ಕಲಕೋಟೆ ಹೋಬಳಿಗೆ ಮದುವೆ ನಿಶ್ಚಯ ಕಾರ್ಯಕ್ರಮದ ನಿಮಿತ್ತ ಬೈಕ್ ನಲ್ಲಿ ಹೋಗುವಾಗ ಕಾರು ಡಿಕ್ಕಿ ಹೊಡೆದಿದೆ.
ರಕ್ತಸ್ರಾವದಿಂದ ಬಳಲುತ್ತಿದ್ದ ಶರೀಫ್ ಅವರನ್ನ ಸಿರುಗುಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸುವಾಗ ಮಾರ್ಗ ಮಧ್ಯೆದಲ್ಲೇ ಸಾವನ್ನಪ್ಪಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.