ಹೊಸಪೇಟೆ: ನಗರದ ಮೇನ್ ಬಜಾರ್ ನಲ್ಲಿ ಕೊರೊನಾ ನಿಯಮ ಉಲ್ಲಂಘನೆ ಮಾಡಿದ ಅಂಗಡಿ ಮಾಲೀಕನ ವಿರುದ್ಧ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊರೊನಾ ಮಹಾಮಾರಿ ತಡೆಗಟ್ಟುವ ಸಲುವಾಗಿ ಸರ್ಕಾರ ಕರ್ಫ್ಯೂ ಜಾರಿ ಮಾಡಿ ಪಾಲಿಸುವಂತೆ ಸೂಚನೆ ನೀಡಿದೆ. ಆದರೆ, ನಗರದಲ್ಲಿ ಇದಕ್ಕೆ ಸಾರ್ವಜನಕರ ನಿರ್ಲಕ್ಷ್ಯ ಹಾಗೂ ಅಂಗಡಿ ಮಾಲೀಕರ ನಿಯಮ ಉಲ್ಲಂಘನೆ ಸಾಮಾನ್ಯವಾಗಿ ಬಿಟ್ಟಿವೆ. ಇದರಿಂದ ಪೊಲೀಸರು ಕೂಡ ಎಚ್ಚೆತ್ತು ಇದೀಗ ನಿಯಮ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿದೆ.
ನಗರದ ಸಹನಾ ಫುಟ್ ವೇರ್ ಅಂಗಡಿ ಮಾಲೀಕ ತಾಯಪ್ಪ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಅಂಗಡಿ ತರೆಯುವಂತಿಲ್ಲ. ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.