ಬಳ್ಳಾರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಬಳ್ಳಾರಿಯಲ್ಲಿ 150 ದಂಪತಿಗಳಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ನಡೆಸಲಾಯಿತು.
ಈ ವೇಳೆ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ನ ಬಳ್ಳಾರಿ ತಾಲೂಕಿನ ಯೋಜನಾಧಿಕಾರಿ ಎಂ.ಆರ್.ನಿರಂಜನ, ಡಾ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಮಹಿಳೆಯರ ಸ್ವ ಸಹಾಯ ಗುಂಪುಗಳ ರಚನೆ ಮಾಡಿ ಅವರಿಗೆ ಆರ್ಥಿಕ ಸಹಾಯಕ್ಕಾಗಿ ಮತ್ತು ಸ್ವ ಉದ್ಯೋಗಕ್ಕೆ ಪ್ರೇರಣೆ ನೀಡುವ ಕೆಲಸವನ್ನು ಮಾಡುತ್ತಾ ಬಂದಿದ್ದೇವೆ. ನಗರದಲ್ಲಿ ಭಜನಾ ಕಾರ್ಯಕ್ರಮ, ವರಮಹಾಲಕ್ಷ್ಮಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಜನರಲ್ಲಿ ಆಚಾರ ವಿಚಾರಗಳ ಬಗ್ಗೆ ಅರಿವು ಮುಡಿಸುವುದಾಗಿ ತಿಳಿಸಿದರು.