ಬಳ್ಳಾರಿ: ಚಲಿಸುತ್ತಿದ್ದ ಶಾಲಾ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಸಿರುಗುಪ್ಪ ಹಾಗೂ ತೆಕ್ಕಲಕೋಟೆ ನಡುವಿನ ರಸ್ತೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳು ಹಾಗೂ ಚಾಲಕನ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿರುಗುಪ್ಪದಿಂದ ತೆಕ್ಕಲಕೋಟೆ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ.
ಬಸ್ನಲ್ಲಿ 50 ಮಕ್ಕಳು ಪ್ರಯಾಣಿಸುತ್ತಿದ್ದರು ಈ ವೇಳೆ ಬಸ್‌ಗೆ ಇದ್ದಕ್ಕಿದ್ದಂತೆ ಬೆಂಕಿ ತಗುಲಿದೆ. ಸಿರುಗುಪ್ಪ ಪಟ್ಟಣದ ವಿಶ್ವ ಜ್ಯೋತಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ ಇದಾಗಿದೆ. ಬಸ್ನ ಇಂಜಿನ್ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಮಕ್ಕಳನ್ನು ಕೂಡಲೇ ಕೆಳಗಿಳಿಸಿ ದುರ್ಘಟನೆ ತಪ್ಪಿಸಿದ್ದಾರೆ. ಮಕ್ಕಳು ಪರೀಕ್ಷೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಬಸ್‌ಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಪ್ಲಾಸ್ಟಿಕ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ - ವಿಡಿಯೋ
ಹತ್ತಾರು ಎಕರೆ ಅರಣ್ಯ ಅಗ್ನಿಗಾಹುತಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ನಗರದ ಬಿಣಗಾ ಸಮೀಪದ ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲಿ ಹತ್ತಾರು ಎಕರೆ ಅರಣ್ಯ ನಾಶವಾಗಿದೆ. ರಾಮನಗರ ಅರಣ್ಯ ಪ್ರದೇಶದಲ್ಲಿ ಭಾನುವಾರ ಸಂಜೆ ವೇಳೆಗೆ ಕಾಣಿಸಿಕೊಂಡ ಬೆಂಕಿ ರಾತ್ರಿ ವೇಳೆ ಹತ್ತಾರು ಎಕರೆ ಪ್ರದೇಶಕ್ಕೆ ವ್ಯಾಪಿಸಿತ್ತು. ವಿಷಯ ತಿಳಿದ ಅಗ್ನಿಶಾಮಕ, ಅರಣ್ಯ ಇಲಾಖೆ ಸಿಬ್ಬಂದಿ ಹಾಗು ನೌಕಾ ದಳದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಗುಡ್ಡದ ತಳಭಾಗದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದರು. ಆದರೆ ನೌಕಾ ನೆಲೆಯ ಭಾಗದಲ್ಲಿ ಬೆಂಕಿಯ ಪ್ರಮಾಣ ಹೆಚ್ಚಾಗಿತ್ತು.
ಆಕಸ್ಮಿಕವಾಗಿ ಬೆಂಕಿಗೆ ಸಂಪೂರ್ಣ ಹೊತ್ತಿ ಊರಿದ ಟ್ರಕ್: ಚಲಿಸುತ್ತಿದ್ದ ಟ್ರಕ್ನಲ್ಲಿ ತಾಂತ್ರಿಕ ದೋಷದಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಸಂಪೂರ್ಣ ಹೊತ್ತಿ ಊರಿದಿರೋ ಘಟನೆ ತುಮಕೂರು ಜಿಲ್ಲೆಯ ಶಿರಾ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಳೆದ ವಾರ ನಡೆದಿತ್ತು. ಶಿರಾ ತಾಲೂಕಿನ ಕಡವಿಗೆ ಮೇಲು ಸೇತುವೆಯ ಬಳಿ ಅವಘಡ ಸಂಭವಿಸಿತ್ತು. ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಟ್ರಕ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕ್ಷಣಾರ್ಧದಲ್ಲೇ ಟ್ರಕ್ ತುಂಬೆಲ್ಲ ಆವರಿಸಿತ್ತು.
ಇನ್ನು ಈ ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕನ ಸಮಯ ಪ್ರಜ್ಞೆಯಿಂದ ಕ್ಲೀನರ್ ಹಾಗೂ ಆತನ ಪ್ರಾಣ ಉಳಿದಿತ್ತು. ದೂರದ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಟ್ರಕ್ನ ಇಂಜಿನ್ನಲ್ಲಿ ಉಷ್ಣಾಂಶ ಹೆಚ್ಚಾಗಿದ್ದ ಕಾರಣ ಈ ರೀತಿ ಬೆಂಕಿ ಹೊತ್ತುಕೊಂಡಿದೆ ಎಂದು ಹೇಳಲಾಗಿತ್ತು. ಅಲ್ಲದೇ ಬೆಂಕಿ ಒತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದರೆ, ಟ್ರಕ್ನಲ್ಲಿದ್ದ ಸಾಮಗ್ರಿಗಳನ್ನು ಉಳಿಸಬಹುದಾಗಿತ್ತು. ಆದರೆ, ಹೆದ್ದಾರಿಯ ಸಮೀಪ ಅಗ್ನಿಶಾಮಕ ದಳ ಇಲ್ಲದೇ ಇರುವುದು ಕೂಡ ಈ ರೀತಿ ಅವಘಡದಲ್ಲಿ ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಹೆಚ್ಚು ನಷ್ಟ ಸಂಭವಿಸುತ್ತಿರುವುದಕ್ಕೆ ಕಾರಣ ಎಂದು ಸ್ಥಳೀಯರ ಆರೋಪಿಸಿದ್ದರು.