ETV Bharat / state

ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳದ ದೂರು: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅಮಾನತು

author img

By

Published : Mar 18, 2021, 8:03 PM IST

ಹೊಸಪೇಟೆಯ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಸದ್ಯ ಶಿಕ್ಷಕನನ್ನು ಆಮಾನತು ಮಾಡಿ ಪ್ರಕರಣ ದಾಖಲಿಸಲಾಗಿದೆ.

School Headmaster suspended due to sexual harassment allegation
ಮುಖ್ಯ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಹೊಸಪೇಟೆ: ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ತಾಲೂಕಿನ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿ ಬಳ್ಳಾರಿ ಡಿಡಿಪಿಐ ಸಿ.ರಾಮಪ್ಪ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕ ಟಿ.ಜಂಬಣ್ಣ ಎಂಬಾತನ ವಿರುದ್ಧ ಲೈಂಗಿಕ ಕಿರುಕುಳ ಕುರಿತು ವಿದ್ಯಾರ್ಥಿನಿಯರು ಹೊಸಪೇಟೆ ಬಿಇಒ ಸುನಾಂದ ಅವರಿಗೆ ಲಿಖಿತ ದೂರು ನೀಡಿದ್ದರು. ಮೇಲ್ನೋಟಕ್ಕೆ ಶಿಕ್ಷಕನ ವಿರುದ್ಧದ ಆರೋಪ ಸಾಬೀತಾಗಿದೆ. ಹೀಗಾಗಿ ಶಿಕ್ಷಕ ಜಂಬಣ್ಣನನ್ನು ಕರ್ನಾಟಕ ನಾಗರೀಕ ಸೇವೆ ನಿಯಮಗಳಡಿ ಅಮಾನತು ಮಾಡಲಾಗಿದೆ.

ಓದಿ : ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ

ಸದ್ಯ, ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.