ಬಳ್ಳಾರಿ: ಮೊದಲನೇ ಹಂತದ ಲಾಕ್ ಡೌನ್ ಮುಕ್ತಾಯವಾಗಿದ್ದು, ಇದೀಗ ಎರಡನೇ ಹಂತದ ಲಾಕ್ ಡೌನ್ ಶುರುವಾಗಿದೆ. ಗಣಿಜಿಲ್ಲೆಯಲ್ಲಿ ಪರಿಸ್ಥಿತಿ ಹೇಗಿದೆ ಎಂಬುದರ ಕುರಿತ ಈಟಿವಿ ಭಾರತದ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಹೀಗಿದೆ.
ಜಿಲ್ಲೆಯಲ್ಲಿ ಆರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಬಳ್ಳಾರಿ, ಸಿರುಗುಪ್ಪ ಹಾಗೂ ಹೊಸಪೇಟೆ ತಾಲೂಕಿನಲ್ಲಿ ಈ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯ ಹಡಗಲಿ, ಕೂಡ್ಲಿಗಿ, ಸಂಡೂರು ಹಾಗೂ ಹಗರಿ ಬೊಮ್ಮನಹಳ್ಳಿ ತಾಲೂಕಿನಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎನ್ನಲಾಗಿದೆ.