ಬಳ್ಳಾರಿ: ಜಿಲ್ಲೆಯ ಹಿರಿಯ ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ (81) ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಪ್ರದೇಶದ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ 11.30 ಗಂಟೆಗೆ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಅವರನ್ನ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮನ್ಸೂರ್ ಅವರು ಪುತ್ರರಿಬ್ಬರು ಹಾಗೂ ಪುತ್ರಿಯನ್ನ ಅಗಲಿದ್ದಾರೆ. ಅವರ ಪತಿ ಲಿಂಗರಾಜ ಮನ್ಸೂರ್ ಹಲವು ವರ್ಷಗಳ ಹಿಂದೆಯೇ ಸಾವನ್ನಪ್ಪಿದ್ದರು. ಮೃತರು ನಾಡೋಜ, ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾಯಲಯದ ಗೌರವ ಡಾಕ್ಟರೇಟ್, ರಾಜ್ಯೋತ್ಸವ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.