ETV Bharat / state

ಪ್ರತ್ಯೇಕ ಅಪಘಾತ ಪ್ರಕರಣ: ಬಳ್ಳಾರಿಯಲ್ಲಿ ಇಬ್ಬರು ವ್ಯಕ್ತಿಗಳು ಸಾವು

ಬಳ್ಳಾರಿಯಲ್ಲಿ ನಡೆದ ಎರಡು ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ.

Two persons died at Bellary
ಇಬ್ಬರು ವ್ಯಕ್ತಿಗಳು ಸಾವು
author img

By

Published : May 16, 2020, 12:01 PM IST

ಬಳ್ಳಾರಿ: ವಿದ್ಯುತ್​ ಕಂಬಕ್ಕೆ ಬೈಕ್​ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ.

ಟಿ.ಪವನ್​​ (27) ಮೃತ ಚಾಲಕ. ಹೊಸಕೆರೆ ಗ್ರಾಮದ ಹೊರ ವಲಯದಲ್ಲಿ ಬೈಕ್​​ನಲ್ಲಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಬೈಕ್​ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತ: ಬೈಕ್ ಸವಾರ ಸಾವು, ಮತ್ತೊಬ್ಬನಿಗೆ ಚಿಕಿತ್ಸೆ:

ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ವ್ಯಕ್ತಿಗಳು ಸಾವು

ಮೇ12 ರಂದು ನಗರದ ಬುಡಾ ಕಚೇರಿಯ ಮುಂಭಾಗದಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಕುಮಾರ್(35) ವಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ಮೂಲತಃ ಆಂಧ್ರಪ್ರದೇಶದ ರಾಯದುರ್ಗ ತಾಲೂಕಿನ ನಾಗಲಾಪುರದವರಾಗಿದ್ದು, ಎಪಿಎಂಸಿ ಮಾರುಕಟ್ಟೆಗೆ ಬಂದು ವಾಪಸ್ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು. ಇವರನ್ನು ವಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇವರ ಜೊತೆಗೆ ಹಿಂಬದಿಯಲ್ಲಿದ್ದ ವ್ಯಕ್ತಿ ಕೂಡ ಗಾಯಗೊಂಡಿದ್ದು, ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಂಚಾರಿ ಠಾಣೆಯ ಪೊಲೀಸರು ಘಟನೆಯ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.