ಬಳ್ಳಾರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿಂದು ಮೆಗಾ ಇ-ಲೋಕ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಮೂಲಕ ಅಂದಾಜು 10,358 ಪ್ರಕರಣಗಳನ್ನು ರಾಜಿ ಸಂಧಾನದ ಮುಖೇನ ಇತ್ಯರ್ಥಗೊಳಿಸಲು ಪ್ರಾಧಿಕಾರ ಮುಂದಾಗಿದೆ.
ಚೆಕ್ ಬೌನ್ಸ್, ಅಪರಾಧ ಹಾಗೂ ಕೌಟುಂಬಿಕ ಕಲಹ ಸೇರಿದಂತೆ ಹಣಕಾಸು ವ್ಯವಹಾರದ ದಾವೆಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಜಿಲ್ಲೆಯಲ್ಲಿ ಅದಾಲತ್‌ನ 28 ಪೀಠಗಳನ್ನು ಸ್ಥಾಪಿಸಲಾಗಿದ್ದು, ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮೆಗಾ ಇ-ಲೋಕ ಅದಾಲತ್ ಕಾರ್ಯಕ್ರಮ ಆರಂಭವಾಗಲಿದೆ.
ಈ ಸಂಬಂಧ ಈಟಿವಿ ಭಾರತದೊಂದಿಗೆ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್.ಮಲ್ಲೂರ, ಅದಾಲತ್ಗೆ ಬರುವವರನ್ನು ಕಡ್ಡಾಯವಾಗಿ ಕೋವಿಡ್ - 19 ಟೆಸ್ಟ್ಗೆ ಒಳಪಡಿಸಲಾಗುವುದು. ಎಲ್ಲಾ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗುವುದು ಎಂದರು.