ETV Bharat / state

ಶಿವರಾತ್ರಿ ಹಿನ್ನೆಲೆ: ಹಂಪಿ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

author img

By

Published : Mar 11, 2021, 9:57 AM IST

ವಿಶ್ವವಿಖ್ಯಾತ ಹಂಪಿ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು.

ಹಂಪಿ ವಿರೂಪಾಕ್ಷೇಶ್ವರ ದೇವಾಲಯ
Shivaratri Special pooja in Virupaksheshwara Temple

ಹೊಸಪೇಟೆ(ವಿಜಯನಗರ): ಇಂದು ದೇಶಾದ್ಯಂತ ಶಿವರಾತ್ರಿ ಸಂಭ್ರಮ ಜೋರಾಗಿದ್ದು, ಈ ನಿಮಿತ್ತ ವಿಶ್ವವಿಖ್ಯಾತ ಹಂಪಿ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಶಿವರಾತ್ರಿ ಹಬ್ಬದ ಪ್ರಯುಕ್ತ ಹಂಪಿ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ವಿರೂಪಾಕ್ಷೇಶ್ವರ ದೇವರಿಗೆ ಮೂರು ಬಾರಿ ಅಭಿಷೇಕ ಹಾಗೂ ಹೋಮ ಪೂಜೆಯನ್ನು ನೆರವೇರಿಸಿ, ಬಳಿಕ ನಾನಾ ಹೂಗಳಿಂದ ಅಲಂಕಾರ ಮಾಡಲಾಯಿತು. ಬಳಿಕ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯ ನೀಡಿರುವ ಚಿನ್ನದ ಕಿರೀಟ ತೊಡಿಸಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ, ಪಂಪಾಂಬಿಕೆ ಹಾಗೂ ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಓದಿ: ಕಾಂಗ್ರೆಸ್ ಸೇರಲು ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಲಿದ್ದಾರೆ ಮಧು ಬಂಗಾರಪ್ಪ

ಸಾಲು ಗಟ್ಟಿ ನಿಂತ ಭಕ್ತರು:

ಶಿವರಾತ್ರಿ ಹಿನ್ನೆಲೆಯಲ್ಲಿ ದೇವರ ದರ್ಶನ ಪಡೆಯಲು ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ನದಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆದು ವಿರೂಪಾಕ್ಷೇಶ್ವರನಿಗೆ ಹೂ, ಹಣ್ಣು ಸಮರ್ಪಿಸಿದರು. ಆಂಧ್ರಪ್ರದೇಶ ತೆಲಂಗಾಣ ರಾಜ್ಯದಿಂದ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಹಜ್ ಮತ್ತು ವಕ್ಫ ಹಾಗೂ ಜಿಲ್ಲಾ ಉಸ್ತುವಾರಿ ಆನಂದ ಸಿಂಗ್ ಅವರ ತಂದೆ ಪೃಥ್ವಿರಾಜ ಸಿಂಗ್ ಅವರು ವಿರೂಪಾಕ್ಷೇಶ್ವರ ದರ್ಶನವನ್ನು ಪಡೆದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.