ETV Bharat / state

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಶ್ವೇತಾ ಬಿ. ಆಯ್ಕೆ

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್​ ಆಗಿ ನಗರದ 31 ವಾರ್ಡ್​ನ ಸದಸ್ಯೆ ಶ್ವೇತಾ ಬಿ. ಆಯ್ಕೆಯಾಗಿದ್ದಾರೆ.

Etv Mayor Shweta B
ಮೇಯರ್ ಆಗಿ ಶ್ವೇತಾ.ಬಿ.
author img

By ETV Bharat Karnataka Team

Published : Jan 10, 2024, 1:42 PM IST

Updated : Jan 10, 2024, 3:10 PM IST

ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ

ಬಳ್ಳಾರಿ: ಕಳೆದ ಎರಡು ತಿಂಗಳಿಂದ ಖಾಲಿ ಇದ್ದ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್​ ಆಯ್ಕೆಯ ವಿಚಾರಕ್ಕೆ ಇಂದು ತೆರೆ ಬಿದ್ದಿದೆ. ಬುಧವಾರ ನಡೆದ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಳ್ಳಾರಿ ನಗರದ 31 ವಾರ್ಡ್​ನ ಸದಸ್ಯೆ ಶ್ವೇತಾ ಬಿ ಅವರು ಮೇಯರ್​ ಆಗಿ ಆಯ್ಕೆ ಆಗಿದ್ದಾರೆ. ಶ್ವೇತಾ ಅವರು 29 ಮತಗಳನ್ನು ಪಡೆದಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್​ ಸ್ಥಾನಕ್ಕೆ ಶ್ವೇತಾ ಬಿ ಸೇರಿದಂತೆ ಕಾಂಗ್ರೆಸ್‌ನಿಂದ ಮೂವರು ನಾಮಪತ್ರ ಸಲ್ಲಿಸಿದ್ದರು. ಆದರೇ ಕೊನೆ ಗಳಿಗೆಯಲ್ಲಿ ಮಿಂಚು ಶ್ರೀನಿವಾಸ್​ ಹಾಗು ಕುಬೇರ ನಾಮಪತ್ರ ವಾಪಸ್​ ಪಡೆದಿದ್ದಾರೆ.

ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ ಅವರು, ಮಹಾನಗರ ಪಾಲಿಕೆ ಸದಸ್ಯರಲ್ಲಿ ಯಾವುದೇ ಗೊಂದಲ ಇಲ್ಲ. ಶಾಸಕ ನಾರಾ ಭರತ್​ ರೆಡ್ಡಿ ನನ್ನ ನಡುವೆ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲಾ ಒಂದಾಗಿದ್ದೇವೆ, ಒಗ್ಗಟ್ಟಾಗಿದ್ದೇವೆ. ಪಕ್ಷದ ಸಿದ್ಧಾಂತದ ಪ್ರಕಾರ ನಾವೆಲ್ಲಾ ಕೆಲಸ ಮಾಡುತ್ತಿದ್ದೇವೆ. ನಗರದ ಅಭಿವೃದ್ಧಿಗೆ ಒಂದಾಗಿ ಶ್ರಮಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್‌ ರೆಡ್ಡಿ, ರಾಜ್ಯಸಭಾ ಸದಸ್ಯ ನಾಸೀ‌ರ್ ಹುಸೇನ್ ಸೇರಿದಂತೆ ಇನ್ನಿತರೆ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕೇಂದ್ರದಿಂದ ದುರುದ್ದೇಶವಿಲ್ಲ; ರಾಜ್ಯದ ಟ್ಯಾಬ್ಲೋ ಕೈಬಿಟ್ಟದ್ದನ್ನು ಸಮರ್ಥಿಸಿಕೊಂಡ ಬಿ ವೈ ವಿಜಯೇಂದ್ರ

Last Updated : Jan 10, 2024, 3:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.