ಬಳ್ಳಾರಿ : ಜಿಲ್ಲೆಯ ಸಿರುಗುಪ್ಪ ತಾಲೂಕಿನ ವಿವೇಕಾನಂದ ಪಬ್ಲಿಕ್ ಶಾಲೆಯಲ್ಲಿಂದು ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ ಶಾಸಕ ಎಂ ಎಸ್ ಸೋಮಲಿಂಗಪ್ಪನವರು ಭೇಟಿ ನೀಡಿ ಮತ ಎಣಿಕೆ ಕಾರ್ಯ ವೀಕ್ಷಣೆ ಮಾಡಿದ್ರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುವ ನಿರೀಕ್ಷೆಯಿದೆ. ನಾವು ಯಾರ ಟಾರ್ಗೇಟ್ ಕೂಡ ಅಲ್ಲ. ಎಲ್ಲವೂ ನಮ್ಮ ಟಾರ್ಗೇಟ್ ಎಂದು ನಸುನಕ್ಕು ಸಾಗಿದರು.