ಬಳ್ಳಾರಿ: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಜಿಲ್ಲೆಯ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಎಸ್.ಸೋಮಲಿಂಗಪ್ಪಗೆ ಕೂಡ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಕುರಿತು ಶಾಸಕರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ನನಗೆ ಎರಡು ದಿನಗಳಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೊರೊನಾ ಪರೀಕ್ಷೆ ಮಾಡಿಸಿದ್ದು, ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ಯಾರೂ ಕೂಡ ಆತಂಕಕ್ಕೆ ಒಳಗಾಗದೇ ನನ್ನೊಂದಿಗೆ ಸಂಪರ್ಕಕ್ಕೆ ಇದ್ದವರು ಸ್ವಯಂ ಪ್ರೇರಿತರಾಗಿ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ನಾನು ಆರೋಗ್ಯವಾಗಿದ್ದು, ಯಾರೂ ಕೂಡ ಭಯಪಡುವುದು ಬೇಡ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ಶಾಸಕರ ಜೊತೆ ಪ್ರಥಮ ಸಂಪರ್ಕ ಹೊಂದಿದ್ದ 9 ಮಂದಿಯನ್ನು ಹೋಂ ಐಸೋಲೇಷನ್ನಲ್ಲಿ ಇರಿಸಲಾಗಿದೆ.