ETV Bharat / state

ಬಳ್ಳಾರಿ:  6 ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರ್! - ಪಿಪಿಇ ಕಿಟ್​

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಆರು ಸೋಂಕಿತ ವಿದ್ಯಾರ್ಥಿಗಳು ಪಿಪಿಇ ಕಿಟ್​ ಧರಿಸಿ, ಆ್ಯಂಬುಲೆನ್ಸ್​ನಲ್ಲಿ ಬಂದು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದಾರೆ.

corona infected students
ಕೊರೊನಾ ಸೋಂಕಿತ ವಿದ್ಯಾರ್ಥಿಗಳು
author img

By

Published : Jul 30, 2020, 10:27 AM IST

ಬಳ್ಳಾರಿ: ಗಣಿ ಜಿಲ್ಲೆಯ ಆರು ಮಂದಿ ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ಈ ದಿನ ನಡೆಯುವ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದಾರೆ. ಬಳ್ಳಾರಿಯ ಡೆಂಟಲ್ ಕಾಲೇಜಿನ ಕೋವಿಡ್ ಕೇರ್ ಸೆಂಟರ್​​ನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಜಿಲ್ಲಾಡಳಿತ ಸಿಇಟಿ ಪರೀಕ್ಷೆಯನ್ನು ನಿಗದಿಪಡಿಸಿದ್ದು, ಸಿರಗುಪ್ಪ, ಹೂವಿನ ಹಡಗಲಿ ಹಾಗೂ ಬಳ್ಳಾರಿ ತಾಲೂಕಿನ ತಲಾ ಇಬ್ಬರು ಪರೀಕ್ಷೆಗೆ ಹಾಜರಾಗಿದ್ದಾರೆ. ಇವರೆಲ್ಲರೂ ಪಿಪಿಇ ಕಿಟ್ ಧರಿಸಿ ಆ್ಯಂಬುಲೆನ್ಸ್​​ನಲ್ಲಿ ಬಂದು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದಾರೆ.

ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯಾಧಿಕಾರಿ ಡಾ.ಹೆಚ್.ಎಲ್.ಜನಾರ್ದನ ಅವರ ವಿಶೇಷ ಕಾಳಜಿಯಿಂದಾಗಿ ಸೋಂಕಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತಾಗಿದ್ದು ವಿಶೇಷವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.