ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಬಳ್ಳಾರಿಯಲ್ಲಿ ಕರಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಶಾಸಕ ಸೋಮಶೇಖರ ರೆಡ್ಡಿ ಚಾಲನೆ ನೀಡಿದ್ರು.
ಪ್ರತಿ ಮನೆ ಮನೆಗೆ ತೆರಳಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗುವುದು. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ. ಇದರ ಬಗ್ಗೆ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಇದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದು ಶಾಸಕ ಸೋಮಶೇಖರ ರೆಡ್ಡಿ ಹೇಳಿದರು. ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನೀಡಿರುವ ಪ್ರಚೋದನಕಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.