ETV Bharat / state

ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್​ ಘೋಷಣೆ

author img

By

Published : Dec 8, 2022, 6:38 PM IST

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ 2020-21ನೇ ಸಾಲಿನ ವಾರ್ಷಿಕ 10ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್​ ಪ್ರಶಸ್ತಿ ಘೋಷಣೆ ಮಾಡಿದೆ.

sri-krishnadevaraya-university-convocation
ಶ್ರೀ ಕೃಷ್ಣದೇವಾರಾಯ ವಿವಿ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್​ ಪ್ರಶಸ್ತಿ

ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕುಲಪತಿ ಪ್ರೊ.ಸಿದ್ದು ಪಿ. ಅಲಗೂರು, ಈ ಬಾರಿಯ ಘಟಿಕೋತ್ಸವದಲ್ಲಿ ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಕಟಿಸಿದರು.

ಶ್ರೀ ಕೃಷ್ಣದೇವರಾಯ ವಿವಿ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್​ ಪ್ರಶಸ್ತಿ

ಸಾವಯುವ ಕೃಷಿಕ ಚಿತ್ರದುರ್ಗ ಜಿಲ್ಲೆಯ ಎಸ್‌.ಸಿ. ವೀರಭದ್ರಪ್ಪ, ಬೆಳಗಾವಿಯ ವೈದ್ಯ ಡಾ. ಮಲ್ಲಿಕಾರ್ಜುನ ವಿ. ಜಾಲಿ ಮತ್ತು ಬಳ್ಳಾರಿಯ ಉತ್ತಮ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ್ದ ದಿವಂಗತ ಬಹದ್ದೂರ್​ ಎಸ್. ಶೇಷಗಿರಿರಾವ್‌ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ. ಘಟಿಕೋತ್ಸವದಲ್ಲಿ ವಿವಿಧ ವಿಭಾಗಗಳಲ್ಲಿ 60 ಚಿನ್ನದ ಪದಕಗಳ ಪೈಕಿ ಒಟ್ಟು 48 ವಿದ್ಯಾರ್ಥಿಗಳು ಚಿನ್ನದ ಪದಕ ಮುಡಿಗೇರಿಸಿಕೊಳ್ಳಲಿದ್ದಾರೆ. 17 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಅಕ್ಷಿತಾ ಕುಮಾರಿ 4 ಚಿನ್ನದ ಪಡೆಯಲಿದ್ದಾರೆ.

ಘಟಿಕೋತ್ಸವ ಭಾಷಣವನ್ನು ಇಸ್ರೋದ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಕಾರ್ಯಕ್ರಮದಲ್ಲಿ ಉಪಸ್ಥಿತರಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಗಡಿ ಸಂಘರ್ಷ: ವಿಜಯಪುರ, ದಾವಣಗೆರೆಯಲ್ಲಿ ಕರವೇ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.