ಬಳ್ಳಾರಿ: ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬೆಳಗ್ಗೆ 10:30 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಯಿತು. ಉಭಯ ಜಿಲ್ಲೆಗಳಲ್ಲಿ 222 ಪರೀಕ್ಷೆ ಕೇಂದ್ರಗಳನ್ನ ಸ್ಥಾಪಿಸಲಾಗಿದ್ದು, ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ನೂರಾರು ವಿದ್ಯಾರ್ಥಿಗಳು ಆಗಮಿಸಿ ಪರೀಕ್ಷೆ ಬರೆಗೆ ಹಾಜರಾದ್ರು.
ಕುರುಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಂದು ಕೋವಿಡ್ ಸೋಂಕಿತ ಓರ್ವ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ ಎಂದು ಡಿಡಿಪಿಐ ಮಾಹಿತಿ ನೀಡಿದ್ದಾರೆ.
ಉಭಯ ಜಿಲ್ಲೆಗಳಲ್ಲಿ 42,989 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಂಡು ಹಾಗೂ ಹ್ಯಾಂಡ್ ಸ್ಯಾನಿಟೈಸರ್ ಅನ್ನ ಕಡ್ಡಾಯವಾಗಿ ಹಚ್ಚಿಕೊಂಡೇ ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಸರತಿ ಸಾಲಿನಲ್ಲಿ ವಿದ್ಯಾರ್ಥಿಗಳು ನಿಂತಿದ್ದ ದೃಶ್ಯಗಳು ಕಂಡುಬಂದವು.
ಪ್ರತಿ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಒಂದು ಟೇಬಲ್ಗೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಡಿಡಿಪಿಐ ಸಿ.ರಾಮಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ:SSLC Exam ಪ್ರಾರಂಭ: ಪರೀಕ್ಷಾ ಕೇಂದ್ರಗಳಿಗೆ ದಿಢೀರ್ ಭೇಟಿ ಕೊಟ್ಟ ಸಚಿವ ಸುರೇಶ್ ಕುಮಾರ್