ಹೊಸಪೇಟೆ: ನಗರದ ಪರಿವೀಕ್ಷಣ ಮಂದಿರದಲ್ಲಿ ತಾಲೂಕು ರೈತ ಸಂಘದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದಮ, ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್, ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆಯನ್ನು ಸ್ಥಾಪಿಸಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದ ಭರವಸೆ ಹುಸಿಯಾಗಿದೆ ಎಂದರು.
ರಾಜ್ಯದಲ್ಲಿ ನೆರೆ ಹಾಳಿಯಿಂದ ರೈತರು ಕಂಗಾಲಾಗಿದ್ದಾರೆ. ಮಳೆಯಿಂದ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜ್ಯ ಸರ್ಕಾರವು ತಾರತಮ್ಯ ಮಾಡುತ್ತಿದೆ. ನೆರೆ ಪರಿಹಾರ ಸರಿಯಾಗಿ ರೈತರಿಗೆ ಮುಟ್ಟುತ್ತಿಲ್ಲ. ಮನೆಯನ್ನು ಕಳೆದುಕೊಂಡವರಿಗೆ ಮನೆಯನ್ನು ನಿರ್ಮಿಸಿಕೊಡಬೇಕು ಎಂದರು.
ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂಬರುವ ಉಪ ಚುನಾವಣೆಯಲ್ಲಿ ರಾಜ್ಯದ ಮಣ್ಣಿನ ಮಕ್ಕಳು ರಾಜಕಾರಣಿಗಳಿಗೆ ಮಣ್ಣು ಮುಕ್ಕಿಸುತ್ತಾರೆ. ನವೆಂಬರ್ 7ರಂದು ಬೆಂಗಳೂರಿನಲ್ಲಿ ಸುಮಾರು ಹತ್ತು ಸಾವಿರ ಜನ ರೈತರು ಮೌರ್ಯ ವೃತ್ತದಿಂದ ಸಾಗಿ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದರು.