ಬಳ್ಳಾರಿ: ಗಣಿನಗರಿ ಬಳ್ಳಾರಿಯ ನಡು ರಸ್ತೆಯಲ್ಲೇ ಬಿಡಾಡಿ ದನಗಳು ಬೀಡುಬಿಟ್ಟಿದ್ದು, ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಉಂಟು ಮಾಡುತ್ತಿವೆ.
ಇಷ್ಟೆಲ್ಲ ಸಮಸ್ಯೆಗಳನ್ನು ಜನರು ಅನುಭವಿಸುತ್ತಿದ್ದರೂ, ಬಿಡಾಡಿ ದನಗಳನ್ನು ಊರಾಚೆಗೆ ಕಳಿಸುವ ಯಾವ ಕ್ರಮವನ್ನು ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಡುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದು, ಕೂಡಲೇ ಕ್ರಮಕ್ಕೆ ಮುಂದಾಗುವಂತೆ ಆಗ್ರಹಿಸಿದ್ದಾರೆ.