ಬಳ್ಳಾರಿ : ರಸ್ತೆ ದಾಟುವಾಗ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ನಂದಿನಿ (22) ಮೃತ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಎಸ್.ಜಿ.ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಎಂದಿನಂತೆ ತರಗತಿಗಳನ್ನು ಮುಗಿಸಿಕೊಂಡು ಕಾಲೇಜಿನಿಂದ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ತಾಳೂರು ರಸ್ತೆಯ ರೇಣುಕಾ ನಗರಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ನಂದಿನಿಗೆ ಡಿಕ್ಕಿ ಹೊಡೆದಿದೆ. ಕೂಡಲೇ ಸಾರ್ವಜನಿಕರು ವಿದ್ಯಾರ್ಥಿನಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಟಿಪ್ಪರ್ ವಿದ್ಯಾರ್ಥಿನಿಯ ಮೇಲೆ ಹರಿದಿದ್ದರಿಂದ ರೊಚ್ಚಿಗೆದ್ದ ಜನ ಟಿಪ್ಪರ್ ಲಾರಿಗೆ ಕಲ್ಲು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಜನರನ್ನು ಚದುರಿಸಿದ್ದು, ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ಲವ್ ಮ್ಯಾರೇಜ್ ಆದ ಮಗಳು.. ವರ್ಷದ ಬಳಿಕ ಅಳಿಯನ ಗುಂಡಿಕ್ಕಿ ಕೊಂದ ಮಾವ!