ಬಳ್ಳಾರಿ : ನಗರದ ರಾಯಲ್ ವೃತ್ತದಲ್ಲಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಹೈದರಾಬಾದ್ನಲ್ಲಿ ಸಾಮೂಹಿಕ ಅತ್ಯಾಚಾರವೆಸಗಿ ಯುವತಿಯ ಕೊಲೆ ಮಾಡಿದ ಘಟನೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಕೊಲೆ ಮಾಡಿದ ಅಪರಾಧಿಗಳನ್ನು ಕೂಡಲೇ ಬಂಧಿಸಿ, ಅವರಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ಇನ್ನು ಈ ಪ್ರತಿಭಟನೆಯಲ್ಲಿ ವಿವಿಧ ಶಾಲಾ ಕಾಲೇಜ್ನ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.