ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯ ವಿಭಜನೆ ಖಂಡಿಸಿ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಹಾಗೂ ಮಾಜಿ ಸಂಸದ ವಿ.ಎಸ್.ಉಗ್ರಪ್ಪನವರ ನೇತೃತ್ವದ ನಿಯೋಗ ಇಂದು ಬೆಂಗಳೂರಿಗೆ ತೆರಳಿ ಅಂದಾಜು ಲಕ್ಷಕ್ಕೂ ಅಧಿಕ ಅಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಿದರು.
ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿರುವ ಕುರಿತ ಅಕ್ಷೇಪಣಾ ಅರ್ಜಿಗಳನ್ನು ಸ್ವೀಕರಿಸಿದ ರವಿ ಕುಮಾರ್, ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದೆಂದು ಈ ವೇಳೆ ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಮುಂಡರಗಿ ನಾಗರಾಜ, ಬಿ.ಎಂ.ಪಾಟೀಲ, ಎಲ್.ಹನುಮಂತಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಜಿಲ್ಲಾ ಹೋರಾಟ ಸಮಿತಿಯ ಮುಖಂಡರಾದ ಚಾಗನೂರು ಮಲ್ಲಿಕಾರ್ಜುನ ರೆಡ್ಡಿ ಇದ್ದರು.