ಹೊಸಪೇಟೆ: ನಗರದಲ್ಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರು ಇಂದು ಬೆಳಗ್ಗೆ ನಾಮಪತ್ರವನ್ನು ಸಲ್ಲಿಸಿದರು.
ನಾಮಪತ್ರವನ್ನು ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬಿಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಾಗಿದೆ. ಬಿಡಿಸಿಸಿ ಸದಸ್ಯರ ಸಹಕಾರವಿದೆ. ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಸಹಕಾರ ಕ್ಷೇತ್ರದಲ್ಲಿ ನಾನೊಬ್ಬ ಹೊಸಬನಾಗಿದ್ದು, ರೈತರಿಗೆ ಸಹಕಾರ ಕ್ಷೇತ್ರದಿಂದ ಸಹಾಯ ಮಾಡಬಹುದಾಗಿದೆ. ರೈತರಿಗೆ ಸುಲಭವಾಗಿ ಸಾಲ ಸಿಗುವ ಸೌಲಭ್ಯವನ್ನು ನೀಡಬೇಕಾಗಿದೆ. ಬಿಡಿಸಿಸಿ ಬ್ಯಾಂಕ್ಗೆ ಶತಮಾನದ ಇತಿಹಾಸವಿದೆ. ರೈತರಿಗೆ ಇಲ್ಲಿವರೆಗೂ ಉತ್ತಮ ಸಾಲ ಸೌಲಭ್ಯವನ್ನು ನೀಡಿದೆ. ಬ್ಯಾಂಕ್ನಲ್ಲಿ ಸಿಬ್ಬಂದಿ ಕೊರತೆ ಇದ್ದು, ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದರು.
ಓದಿ: ಬೆಂಗಳೂರಿನ ಖೋಡೆಸ್ ಗ್ರೂಪ್ ಮೇಲೆ ಐಟಿ ದಾಳಿ
ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಹೆಚ್.ವಿಶ್ವನಾಥ್ ಅವರು ಮಾತನಾಡಿ, 11 ಗಂಟೆ ಒಳಗಡೆ ಸಚಿವ ಆನಂದ ಸಿಂಗ್ ಅವರು ಒಟ್ಟು ಮೂರು ನಾಮಪತ್ರವನ್ನು ಸಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಆನಂದ ಸಿಂಗ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. 2 ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಮಧ್ಯಾಹ್ನ 3 ಗಂಟೆಗೆ ಸಭೆಯನ್ನು ಕರೆದು, ಅಧ್ಯಕ್ಷ ಸ್ಥಾನಕ್ಕೆ ಯಾರು ಎಂಬುದನ್ನು ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.