ಬಳ್ಳಾರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿಯಲ್ಲಿ ಇಂದು ನೂರಾರು ಪೌರಕಾರ್ಮಿಕರು ದಿಢೀರ್ ಪ್ರತಿಭಟನೆ ನಡೆಸಿದರು.
ನಗರದ ಗಡಿಗಿ ಚನ್ನಪ್ಪ ವೃತ್ತದ ಬಳಿಯಿರುವ ಮಹಾನಗರ ಪಾಲಿಕೆ ಕಚೇರಿಯ ಪ್ರವೇಶ ದ್ವಾರದ ಬಳಿಯ ಪಾದಚಾರಿ ರಸ್ತೆಯಲ್ಲಿ ನೂರಾರು ಪೌರಕಾರ್ಮಿಕರು ಜಮಾಯಿಸಿ ಕೆಲಕಾಲ ಪಾಲಿಕೆ ಆಯುಕ್ತರ ವಿರುದ್ಧ ಘೋಷಣೆ ಕೂಗಿದರು. ಕಳೆದ 18 ತಿಂಗಳಿಂದ ಪೌರಕಾರ್ಮಿಕರಿಗೆ ನೀಡಬೇಕಿದ್ದ ಮುಂಗಡ ಅನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾಗಿನ 4.5 ವರ್ಷದ ಪಿಎಫ್ ನೀಡಬೇಕು. ಜೊತೆಗೆ 10 ತಿಂಗಳ ಪಿಎಫ್ ಪಾವತಿಸಬೇಕು ಎಂದು ಒತ್ತಾಯಿಸಿದ್ದಾರೆ.