ಬಳ್ಳಾರಿ: ಕೂಡ್ಲಿಗಿ ತಾಲೂಕಿನ ಹುಡೇಂ ಗ್ರಾಪಂ ಕಚೇರಿ ಆವರಣದಲ್ಲಿ ಗ್ರಾಪಂ ಅಧ್ಯಕ್ಷ ಪಿ.ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.
ಕೂಡ್ಲಿಗಿ ತಾಲೂಕಿನ ಹುಡೇಂ ಗ್ರಾಮದಲ್ಲಿ ನಡೆದ ಗ್ರಾಪಂ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಂತರ ಕಾನಹೊಸಹಳ್ಳಿ ಠಾಣೆ ಪಿಎಸ್ಐ ನಾಗರಾಜ್ ಆಗಮಿಸಿ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ಗ್ರಾಮಗಳಲ್ಲಿ ಲಾಕ್ಡೌನ್ ಆದೇಶವನ್ನು ಪಾಲಿಸಬೇಕು. ಯಾರಾದರೂ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇನ್ನು ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಪಿ.ಮಂಜುನಾಥ, ತಾಲೂಕು ಪಂಚಾಯಿತಿ ಸದಸ್ಯ ಹುಡೇಂ ಜಿ.ಪಾಪನಾಯಕ, ನೋಡಲ್ ಅಧಿಕಾರಿ ಪಂಪಾಪತಿ, ಗ್ರಾಪಂ ಸದಸ್ಯ ರಸೂಲ್ ಸಾಬ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಾರುತಿ ಸೇರಿದಂತೆ ಇತರರಿದ್ದರು.