ಹೊಸಪೇಟೆ (ವಿಜಯನಗರ): ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಶಾಲಾ ಶಿಕ್ಷಕಿಯೊಬ್ಬರು ಇಂದು ಕೊರೊನಾಗೆ ಬಲಿಯಾಗಿದ್ದಾರೆ.
ಶಿಕ್ಷಕಿ ಮಂಜುಳಾ ಹವಾಲ್ದಾರ್(55) ಕರೊನಾಗೆ ಬಲಿಯಾದವರು. ಹಗರಿಬೊಮ್ಮನ ಹಳ್ಳಿ ತಾಲೂಕಿನ ಕಿತ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.
![ಶಿಕ್ಷಕಿ](https://etvbharatimages.akamaized.net/etvbharat/prod-images/02:46:22:1620292582_kn-hpt-01-teacher-death-vsl-ka10031_06052021124831_0605f_1620285511_894.jpg)
ಕಳೆದ ಮೂರ್ನಾಲ್ಕು ದಿನಗಳಿಂದ ಮಂಜುಳಾ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.