ETV Bharat / state

ಟೆಂಡರ್ ಪ್ರಕ್ರಿಯೆ ಕೈಗೊಳ್ಳದೆ ಸರ್ಕಾರ ಕಾಮಗಾರಿ ನಡೆಸಿದ ಆರೋಪ : ಜಿಲ್ಲಾಧಿಕಾರಿಗೆ ದೂರು - Congress leaders demand investigation

ಟೆಂಡರ್ ಪ್ರಕ್ರಿಯೆ ಮುಗಿಯುವ ಮುನ್ನವೇ ಸರ್ಕಾರದ ಕಾಮಗಾರಿ-ಸರ್ಕಾರದ ನಿಯಮ ಉಲ್ಲಂಘನೆ ಆರೋಪ- ಕಾಂಗ್ರೆಸ್​ ಮುಖಂಡರಿಂದ ಡಿಸಿಗೆ ದೂರು

the-government-did-the-work-without-carrying-out-the-tender-process
ಟೆಂಡರ್ ಪ್ರಕ್ರಿಯೆ ಕೈಗೊಳ್ಳದೆ ಸರ್ಕಾರ ಕಾಮಗಾರಿ ನಡೆಸಿದ ಆರೋಪ : ಜಿಲ್ಲಾಧಿಕಾರಿಗೆ ದೂರು
author img

By

Published : Jul 7, 2022, 7:17 PM IST

ಬಳ್ಳಾರಿ: ಸರ್ಕಾರದ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳಬೇಕಾದರೆ ನಿಯಮಾನುಸಾರ ಟೆಂಡರ್ ಕರೆಯಬೇಕಾಗುತ್ತದೆ. ಆದರೆ ನೂತನ ವಿಜಯನಗರ ಜಿಲ್ಲೆಯಲ್ಲಿ ಮಾತ್ರ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಅಂದಾ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.

ಟೆಂಡರ್ ಪ್ರಕ್ರಿಯೆ ಕೈಗೊಳ್ಳದೆ ಸರ್ಕಾರ ಕಾಮಗಾರಿ ನಡೆಸಿದ ಆರೋಪ : ಜಿಲ್ಲಾಧಿಕಾರಿಗೆ ದೂರು

ಏಕೆಂದರೆ 6 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಯನ್ನು ಟೆಂಡರ್ ಪ್ರಕ್ರಿಯೆ ಮುನ್ನವೇ ಕಾಮಗಾರಿ ನಡೆಸುತ್ತಿರುವುದು ಚರ್ಚೆಗೆ ಕಾರಣವಾಗಿದೆ. ವಿಜಯನಗರ, ಜಿಲ್ಲೆಯಾದ ಬಳಿಕ ಜಿಲ್ಲಾ ಕೇಂದ್ರವಾಗಿರುವ ಹೊಸಪೇಟೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ರಸ್ತೆ ಸೇರಿದಂತೆ ನಗರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಆದರೆ ಅಭಿವೃದ್ಧಿ ನೆಪದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ.

ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದೆ ಕಾಮಗಾರಿ ಆರೋಪ : ಹೊಸಪೇಟೆ ನಗರದ ಕ್ರೀಡಾಂಗಣದ ಮಧ್ಯೆ 405 ಅಡಿ ಎತ್ತರದ ಧ್ವಜಸ್ತಂಭ ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿ ಕೂಡ ಭರದಿಂದ ಸಾಗುತ್ತಿದೆ. ಪ್ರವಾಸೋದ್ಯಮ ಇಲಾಖೆಯಿಂದ ಧ್ವಜಸ್ತಂಭ ನಿರ್ಮಾಣಕ್ಕೆ 6 ಕೋಟಿ ರೂ. ಅನುದಾನ ನೀಡಲಾಗಿದೆ. ವಿಪರ್ಯಾಸವೆಂದರೆ ಧ್ವಜಸ್ತಂಭ ನಿರ್ಮಾಣ ಕಾಮಗಾರಿ ಕುರಿತು ಇನ್ನೂ ಟೆಂಡರ್ ಪ್ರಕ್ರಿಯೆಯೇ ಮುಕ್ತಾಯಗೊಂಡಿಲ್ಲ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕಾಮಗಾರಿ ನಡೆಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷವು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಕಾಮಗಾರಿ ನಡೆಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ಸಾರ್ವಜನಿಕರಿಗೆ ಬಹಿರಂಗ ಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.

ಒಂದು ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಕಾಮಗಾರಿಯನ್ನು ಯಾವ ಗುತ್ತಿಗೆದಾರರು ಮಾಡುತ್ತಿದ್ದಾರೆ ಎನ್ನುವುದನ್ನು ಬಹಿರಂಗಪಡಿಸುತ್ತಿಲ್ಲ. ಜೊತೆಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಹೀಗಾಗಿ ಈ ಕಾಮಗಾರಿಯು ಸಾರ್ವಜನಿಕರಲ್ಲಿ ಅನುಮಾನಗಳನ್ನು ಮೂಡಿಸಿದೆ. ಹೊಸಪೇಟೆ ನಗರದಲ್ಲಿ ಈಗಾಗಲೇ ಮೂರು ಧ್ವಜಸ್ತಂಭಗಳನ್ನು ನಿರ್ಮಾಣ ಮಾಡಲಾಗಿದ್ದು, ಮತ್ತೊಂದು ಧ್ವಜಸ್ತಂಭದ ಅವಶ್ಯಕತೆ ಇದೆಯೇ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರೇ ಪ್ರವಾಸೋದ್ಯಮ ಸಚಿವರಾಗಿದ್ದು, ತಮ್ಮ ಸ್ವ ಕ್ಷೇತ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದೆ ಕಾಮಗಾರಿ ನಡೆಸಿರುವುದು ಸರಿಯೇ ಎಂದು ಸಚಿವರನ್ನು ಪ್ರಶ್ನಿಸಿದ್ದಾರೆ. ನಗರಗಳು ಅಭಿವೃದ್ಧಿ ಆಗಬೇಕು ನಿಜ. ಆದರೆ ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ‌ ನಿಯಮಗಳನ್ನು ಗಾಳಿಗೆ ತೂರುವುದು ಎಷ್ಟರ ಮಟ್ಟಿಗೆ ಸರಿ ಅನ್ನೋದು ಕಾಂಗ್ರೆಸ್​ ಮುಖಂಡ ಪ್ರಶ್ನೆಯಾಗಿದೆ.

ಓದಿ :ಗುತ್ತಿಗೆ, ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸಚಿವ ಡಾ. ಸುಧಾಕರ್‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.