ಬಳ್ಳಾರಿ: ಗಣಿ ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನಕ್ಕೆ ಅಂದಾಜು 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಕಳೆದ ಬಾರಿಗೆ ಹೋಲಿಕೆ ಮಾಡಿದ್ರೆ ಈ ಬಾರಿಯು ನೀರಿನ ಒಳಹರಿವು ದುಪ್ಪಟ್ಟು ಪ್ರಮಾಣದಲ್ಲಿ ಹೆಚ್ಚಾಗಿದೆ. ಕಳೆದ ವರ್ಷ ಜಲಾಶಯಕ್ಕೆ ಒಂದೇ ದಿನಕ್ಕೆ ಅಂದಾಜು 40,781 ಕ್ಯೂಸೆಕ್ ನೀರು ಹರಿದುಬಂದಿತ್ತು. ಈ ವರ್ಷ 81,218 ಕ್ಯೂಸೆಕ್ ನೀರು ಹರಿದುಬಂದಿದೆ. ಕಳೆದ ಸಾಲಿನಲ್ಲಿ 40.135 ಟಿಎಂಸಿಯಷ್ಟು ನೀರು ಸಂಗ್ರಹವಾಗಿದ್ದರೆ, ಈ ಸಾಲಿನಲ್ಲಿ 46.556 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಅಂದರೆ, ಸುಮಾರು 6 ಟಿಎಂಸಿಯಷ್ಟು ನೀರು ಹೆಚ್ಚು ಸಂಗ್ರಹವಾಗಿದ್ದು, ಜಿಲ್ಲೆಯ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.
ಆಗಸ್ಟ್ 5 ರಿಂದ ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯದಿಂದ 57,600 ಕ್ಯೂಸೆಕ್ ನೀರನ್ನ ನದಿಗೆ ಹರಿಬಿಡಲಾಗಿದ್ದು, ಜಲಾಶಯದ ಒಳಹರಿವಿನ ಪ್ರಮಾಣದಲ್ಲಿಯೂ ಅಧಿಕವಾಗಿದೆ ಎಂದು ತಿಳಿದು ಬಂದಿದೆ.