ಬಳ್ಳಾರಿ: ಜಿಲ್ಲೆಯ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿರುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಗಮನಕ್ಕೆ ತಂದಿರುವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಬಳ್ಳಾರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಈಗಾಗಲೇ ನಮ್ಮ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಜಿಂದಾಲ್ ಸಮೂಹ ಸಂಸ್ಥೆಯ ಮಾಲೀಕರೊಂದಿಗೆ ಚರ್ಚಿಸಲಿದ್ದು, ಶೀಘ್ರವೇ ಸೂಕ್ತ ನಿರ್ಧಾರ ತೆಗೆದುಕೊಂಡು ಕ್ರಮ ಕೈಗೊಳ್ಳಲಿದ್ದಾರೆ ಎಂದರು.