ಹೊಸಪೇಟೆ : ಹೊಲಕ್ಕೆ ಕೆಲಸ ಹೋಗುತ್ತಿದ್ದ ಮಹಿಳೆಯೊಬ್ಬಳನ್ನು ಅಡ್ಡಗಟ್ಟಿ, ಕುಡಗೋಲಿನಿಂದ ಕುತ್ತಿಗೆ ಕೊಯ್ದು ಹಾಗೂ ತಲೆಗೆ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮೃತಳನ್ನು ನಾಗಮ್ಮ (45) ಎಂದು ಗುರುತಿಸಲಾಗಿದೆ. ಮಹಿಳೆ ಹೊಲಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಶನಿವಾರ ಮಧ್ಯಾಹ್ನ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಶವ ಪತ್ತೆಯಾಗಿದ್ದು, ಭಾನುವಾರ ಬೆಳಗ್ಗೆ ಸ್ಥಳಕ್ಕೆ ಡಿವೈಎಸ್ಪಿ ರಘುಕುಮಾರ ಹಾಗೂ ಗ್ರಾಮೀಣ ಠಾಣೆಯ ಪಿಐ ಶ್ರೀನಿವಾಸ ಮೇಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ರೈಲಿನಡಿ ಸಿಲುಕುತ್ತಿದ್ದ ಮಹಿಳೆಯ ಜೀವ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ