ಬಳ್ಳಾರಿ: ಜಿಲ್ಲೆಯಿಂದ ಸಿರುಗುಪ್ಪಕ್ಕೆ ಆಂಧ್ರ ಪ್ರದೇಶದ ಲಾರಿಯೊಂದು ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಡ್ರೈವರ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಇನ್ನು ವಾಹನದಲ್ಲಿ ಸಿಲುಕಿದ್ದ ಕ್ಲೀನರ್ನನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರ ತೆಗೆದು ಆ್ಯಂಬುಲೆನ್ಸ್ ಮೂಲಕ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಳುಹಿಸಿದ್ದಾರೆ.