ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಹೊಸದಾಗಿ ಮೂರು ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಪಕ್ಕದ ದಾವಣಗೆರೆ ಜಿಲ್ಲೆಯ ಜಗಳೂರಿಗೆ ಹೋಗಿಬಂದ ಹಿನ್ನೆಲೆಯಲ್ಲಿ ಆತನಿಗೂ ಈ ಮಹಾಮಾರಿ ಕೊರೊನಾ ಸೋಂಕು ಇರೋದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.
ಹರಪನಹಳ್ಳಿ ಹಾಗೂ ಮುದ್ಲಾಪುರ ಮೂಲದ ವ್ಯಕ್ತಿಗಳಲ್ಲೂ ಕೂಡ ಈ ಸೋಂಕು ಪತ್ತೆಯಾಗಿದೆ. ಈ ಮೂವರ ಟ್ರಾವೆಲ್ ಹಿಸ್ಟರಿಯ ಹುಡುಕಾಟ ನಡೆದಿದೆ ಎಂದು ಡಿಸಿ ನಕುಲ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 27 ಮಂದಿ ಗುಣಮುಖರಾಗಿದ್ದು, ಕೇವಲ ಓರ್ವ ವ್ಯಕ್ತಿ ಮಾತ್ರ ಸಾವನ್ನಪ್ಪಿದ್ದಾರೆ. 23 ಮಂದಿ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.