ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 32 ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯ ದೇವಿನಗರದ 75 ವರ್ಷದ ವೃದ್ಧೆ, ಸಂಡೂರು ತಾಲೂಕಿನ ಯಶವಂತ ನಗರದ 43 ವರ್ಷದ ಪುರುಷ ಹಾಗೂ ಇನ್ನೊಬ್ಬ ವ್ಯಕ್ತಿ ಸೇರಿದಂತೆ ಮೂವರು ಮೃತ ಪಟ್ಟಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.
ಕಿಡ್ನಿ ಸಮಸ್ಯೆ ಸೇರಿದಂತೆ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದ ಈ ಮೂವರನ್ನ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು. ಎಸ್ ಒಪಿ ಪ್ರಕಾರ ಈ ಮೂವರ ಅಂತ್ಯಕ್ರಿಯೆಯನ್ನ ನಡೆಸಲಾಗುವುದೆಂದು ಡಿಸಿ ಮಾಹಿತಿ ನೀಡಿದ್ದಾರೆ.