ETV Bharat / state

ಬಳ್ಳಾರಿ: ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ - ಬಳ್ಳಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೂವರು ಸಾವು

ಬಳ್ಳಾರಿ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಎರಡು ಪತ್ಯೇಕ ರಸ್ತೆ ಅಪಘಾತಗಳು ನಡೆದಿದ್ದು, ಎರಡು ವರ್ಷದ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ.

Three killed in road accident in Bellary
ಬಳ್ಳಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೂವರು ಸಾವು
author img

By

Published : May 20, 2020, 7:59 AM IST

ಬಳ್ಳಾರಿ: ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿ ಮೂವರು ದುರ್ಮರಣ ಹೊಂದಿದ್ದಾರೆ.

ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ಹೊರವಲಯದ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್​ ಆಗಿ ಬಿದ್ದು, ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ.

ಸಿರುಗುಪ್ಪ ತಾಲೂಕಿನ ಹಾಗಲೂರು ಗ್ರಾಮದ ನಾಗವೇಣಿ ಎಂಬವರು ತನ್ನ ಸಹೋದರನನೊಂದಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ವೈದ್ಯರ ಬಳಿ ಕರೆದೊಯ್ದು ವಾಪಸ್​ ಬರುವಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ನಗರದ ಸಿರುಗಪ್ಪ ರಸ್ತೆಯ ಹೊಕ್ರಾಣಿ ಕ್ಯಾಂಪ್ ಬಳಿ ಟಿವಿಎಸ್ ಬೈಕ್‌ಗೆ ಹಿಂಬಂದಿಯಿಂದ ಬಂದ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೇವಿನಗರದ ನಿವಾಸಿಗಳಾದ ಪೀರಾಸಾಬ (50) ಗೌಸ್ ಮೋಹಿನ್‌ನುದ್ದೀನ್ (55) ಮೃತರು. ಪೈಂಟಿಗ್ ಕೆಲಸಕ್ಕೆಂದು ಕುರುಗೋಡು ಪಟ್ಟಣಕ್ಕೆ ತೆರಳಿ ವಾಪಸ್​ ಬರುವಾಗ ಅಪಘಾತ ಸಂಭವಿಸಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.