ಬಳ್ಳಾರಿ: ಗಣಿನಾಡು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈವರೆಗೆ 21 ಮಂದಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ.
ಬ್ಲ್ಯಾಕ್ ಫಂಗಸ್ ಪತ್ತೆಯಾದ ಬಳಿಕ ಈ ರೋಗಿಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೂವರು ಮೃತಪಟ್ಟಿದ್ದಾರೆ.
ಅವಳಿ ಜಿಲ್ಲೆಗಳಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡ ಎಲ್ಲಾ 21 ಮಂದಿ ಕೊರೊನಾ ಸೋಂಕಿತರೇ ಆಗಿದ್ದಾರೆ ಎಂದು ಡಿಹೆಚ್ ಓ ಡಾ. ಹೆಚ್. ಎಲ್. ಜನಾರ್ಧನ್ ತಿಳಿಸಿದ್ದಾರೆ.