ETV Bharat / state

ಹೊಸಪೇಟೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ - ಬಳ್ಳಾರಿ ಲೆಟೆಸ್ಟ್​ ಕೊರೊನಾ ಅಪ್​ಡೇಟ್​

ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಪೊಲೀಸ್ ಠಾಣೆಯ ಸಿಪಿಐ, ಹೊಸಪೇಟೆ ನಗರದ ಬಡಾವಣೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್​ಸ್ಟೇಬಲ್ ಹಾಗೂ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್​ಸ್ಟೇಬಲ್​ಗೆ ಕೊರೊನಾ ಸೋಂಕು ದೃಢಪಟ್ಟಿದೆ.

DC S.S. Nakul
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
author img

By

Published : Jun 6, 2020, 9:33 PM IST

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಪೊಲೀಸ್ ಠಾಣೆಯ ಸಿಪಿಐ, ಹೊಸಪೇಟೆ ನಗರದ ಬಡಾವಣೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್​ಸ್ಟೇಬಲ್ ಹಾಗೂ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್​ಸ್ಟೇಬಲ್​ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂವರು ಸೋಂಕಿತರನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಠಾಣೆಗಳಲ್ಲಿ ಈ ಮೂವರು ಸೋಂಕಿತರೊಂದಿಗೆ‌ ಮೊದಲ ಸಂಪರ್ಕ ಹೊಂದಿದವರನ್ನ ಆರೋಗ್ಯ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಮೊದಲ ಸಂಪರ್ಕ ಹೊಂದಿದವರನ್ನ ಕ್ವಾರಂಟೈನ್ ಮಾಡಲಾಗುತ್ತಿದೆ. ಕಂಟೈನ್​ಮೆಂಟ್ ಏರಿಯಾದಲ್ಲಿ ಕೆಲಸ ಮಾಡುತ್ತಿರುವಾಗ ಅಥವಾ ಇನ್ಯಾವುದೋ ಮೂಲದಿಂದ ಸೋಂಕು ಹರಡಿರಬಹುದು ಎಂದು ಶಂಕಿಸಲಾಗಿದೆ. ಜಿಲ್ಲೆಯಲ್ಲಿ 60 ಸೋಂಕಿತರ ಪೈಕಿ ಈವರೆಗೂ 43 ಮಂದಿ ಗುಣಮುಖರಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಉಳಿದ 16 ಮಂದಿಯನ್ನ ಐಸೋಲೇಷನ್​ನಲ್ಲಿ ಇರಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.