ಹೊಸಪೇಟೆ (ವಿಜಯನಗರ): ಬಳ್ಳಾರಿ-ವಿಜಯನಗರ ಜಿಲ್ಲೆಗಳ 110 ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಪೈಕಿ ಮೂವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ರು.
110 ಪೊಲೀಸರ ಪೈಕಿ 17 ಜನ ಗುಣಮುಖರಾಗಿದ್ದಾರೆ, ಮೂವರು ಮೃತಪಟ್ಟಿದ್ದಾರೆ. ಒಬ್ಬರು ಎಎಸ್ಐ , ಇಬ್ಬರು ಹೆಡ್ ಕಾನ್ಸ್ಟೇಬಲ್ ಕೊರೊನಾಗೆ ಬಲಿಯಾಗಿದ್ದಾರೆ. ಇನ್ನು 90 CORONA ಪ್ರಕರಣಗಳು ಸಕ್ರಿಯವಾಗಿವೆ ಎಂದು ಸೈದುಲು ಅಡಾವತ್ ಹೇಳಿದ್ರು.
ಉಭಯ ಜಿಲ್ಲೆಗಳಲ್ಲಿ ಅನಗತ್ಯ ಓಡಾಟ ನಡೆಸದಂತೆ ಚೆಕ್ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಅನಗತ್ಯವಾಗಿ ಓಡಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಜನರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಮನೆಯಲ್ಲಿ ಇರಬೇಕು ಎಂದು ಅಡಾವತ್ ಹೇಳಿದ್ರು.