ETV Bharat / state

ಡಿಕೆಶಿ ಬಂಧನಕ್ಕೆ ಖಂಡನೆ: ಕಾಂಗ್ರೆಸ್​​ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ - ಡಿಕೆಶಿ ಬಂಧನ

ಮಾಜಿ ಸಚಿವ ಡಿ.ಕೆ.ಶಿವಕುಮಾರ್​​ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಬಳ್ಳಾರಿಯಲ್ಲಿಂದು ಸಂಜೆ ಪಂಜಿನ ಮೆರವಣಿಗೆ ನಡೆಸಿದರು.

ಪಂಜಿನ ಮೆರವಣಿಗೆ
author img

By

Published : Sep 7, 2019, 11:41 PM IST

ಬಳ್ಳಾರಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್​​ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿರುವ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಜಿಲ್ಲೆಯಲ್ಲಿಂದು ಸಂಜೆ ಪಂಜಿನ ಮೆರವಣಿಗೆ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ

ನಗರದ ಡಬಲ್ ರಸ್ತೆಯಲ್ಲಿರುವ ಈಡಿಗರ ಹಾಸ್ಟೆಲ್ ಮುಂಭಾಗದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕೆಲಕಾಲ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಬಳಿಕ ಹಾಸ್ಟೆಲ್ ಮುಂಭಾಗ ರಸ್ತೆಯಿಂದ ಗಡಿಗಿ ಚನ್ನಪ್ಪ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದರು. ವಾದ್ಯ ಮೇಳದೊಂದಿಗೆ ಈ ಪಂಜಿನ ಮೆರವಣಿಗೆ ನಡೆದಿದ್ದು, ನಗರದ ಪ್ರಮುಖ ರಸ್ತೆಗಳಾದ ಗಡಿಗಿ ಚನ್ನಪ್ಪ, ಮೀನಾಕ್ಷಿ ವೃತ್ತ ಸೇರಿದಂತೆ ಇತರೆಡೆಗಳಲ್ಲಿ ಸಂಚರಿಸಿತು.

ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್​ನ ಪ್ರಬಲ ನಾಯಕರಾದ ಡಿ.ಕೆ.ಶಿವಕುಮಾರ್​​ ಅವರ ಮೇಲೆ ಅಸ್ತ್ರವನ್ನು ಪ್ರಯೋಗಿಸಿದ್ದಾರೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ. ಆಡಳಿತ ಯಂತ್ರದ ದುರ್ಬಳಕೆ ಹಿಂದಿನ ಉದ್ದೇಶದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಹೇಳಿದರು. ಅಂದಾಜು ನೂರಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Intro:ಮಾಜಿ ಸಚಿವ ಡಿಕೆಶಿ ಬಂಧನಕ್ಕೆ ವಿರೋಧ: ಕಾಂಗ್ರೆಸ್ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ
ಬಳ್ಳಾರಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿರುವ ಕ್ರಮ ವನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಬಳ್ಳಾರಿಯಲ್ಲಿಂದು ಸಂಜೆ ಪಂಜಿನ ಮೆರವಣಿಗೆ ಕೈಗೊಂಡಿದ್ದಾರೆ.
ಬಳ್ಳಾರಿ ನಗರದ ಡಬಲ್ ರಸ್ತೆಯಲ್ಲಿರುವ ಈಡಿಗರ ಹಾಸ್ಟೆಲ್ ಮುಂಭಾಗದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಕೆಲಕಾಲ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ, ಹಾಸ್ಟೆಲ್ ಮುಂಭಾಗ ರಸ್ತೆಯಿಂದ ಗಡಿಗಿ ಚನ್ನಪ್ಪ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದರು.
ವಾದ್ಯಮೇಳದೊಂದಿಗೆ ಈ ಪಂಜಿನ ಮೆರವಣಿಗೆ ನಡೆದಿದ್ದು, ನಗರದ ಪ್ರಮುಖ ರಸ್ತೆಗಳಾದ ಗಡಿಗಿ ಚನ್ನಪ್ಪ, ಮೀನಾಕ್ಷಿ ವೃತ್ತ ಸೇರಿದಂತೆ ಇತರೆಡೆಗಳಲ್ಲಿ ಸಂಚರಿಸಿ, ಮಾಜಿ ಸಚಿವ ಡಿಕೆಶಿ ಅವರನ್ನು ಬಂಧಿಸಿರುವ ದುರುದ್ದೇಶದ ಕುರಿತು ಜಾಗೃತಿ ಮೂಡಿಸಿದ್ದಾರೆ.
ಹಾಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರು ಜಾರಿ ನಿರ್ದೇಶನಾಲಯ ವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನ ಪ್ರಬಲ ನಾಯಕರಾದ ಡಿ.ಕೆ.ಶಿವಕುಮಾರ ಅವರ ಮೇಲೆ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.
Body:ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ. ಆಡಳಿತ ಯಂತ್ರಾಂಗ ದುರ್ಬಳಕೆ ಹಿಂದಿನ ಉದ್ದೇಶದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ದೂರಿದ್ದಾರೆ. ಅಂದಾಜು ನೂರಕ್ಕೂ ಹೆಚ್ಚುಮಂದಿ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್.ಮಹಮ್ಮದ ರಫೀಕ್ ಅವರ ಮಾರ್ಗದರ್ಶನದ ಮೇರೆಗೆ ಈ ಪ್ರತಿಭಟನೆ ನಡೆಯಿತು. ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಟಿ.ಪದ್ಮಾ, ಮುಖಂಡರಾದ ವೆಂಕಟೇಶ ಹೆಗಡೆ, ಜೆ.ಎಸ್.ಆಂಜನೇಯಲು, ಕಮಲಾ ಮರಿ ಸ್ವಾಮಿ ಸೇರಿದಂತೆ ಇತರರು ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_4_CONGRESS_PANJU_PROTEST_VISUALS_7203310

KN_BLY_4c_CONGRESS_PANJU_PROTEST_VISUALS_7203310

KN_BLY_4d_CONGRESS_PANJU_PROTEST_VISUALS_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.