ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯ ಉಜ್ಜಿನಿ ರಸ್ತೆಯಲ್ಲಿ ನಿನ್ನೆ ರಾತ್ರಿ 10ಗಂಟೆ ವೇಳೆ ಅಪಘಾತ ಸಂಭವಿಸಿದೆ. ಬೈಕ್ಗೆ ಎದುರಿಗೆ ವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ದಾರುಣವಾಗಿ ಸಾವನಪ್ಪಿದ್ದಾನೆ.
ಕೊಟ್ಟೂರು ತಾಲೂಕಿನ ಮಂಗಾಪುರ ಗ್ರಾಮದ ಕೆ. ನಾಗರಾಜ(35) ಮೃತ ದುರ್ದೈವಿ. ಇವರು ಜಿಂದಾಲ್ ನೌಕರನಾಗಿದ್ದು, ಸಂಡೂರಿನ ವಡ್ಡು ಗ್ರಾಮದಲ್ಲಿ ವಾಸವಿದ್ದರು ಎನ್ನಲಾಗಿದೆ. ಉಜ್ಜಿನಿಯಿಂದ ಕೂಡ್ಲಿಗಿಗೆ ಬರುವಾಗ ಶ್ರೀಸಿದ್ದಯನಗುಡ್ಡದ ಬಳಿ ಘಟನೆ ಜರುಗಿದೆ.
ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.