ಬಳ್ಳಾರಿ: ಗಣಿ ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ 10 ಕ್ರಸ್ಟ್ ಗೇಟ್ಗಳ ಮೂಲಕ ಅಂದಾಜು 24,700 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.
ಸದ್ಯ ತುಂಗಭದ್ರಾ ಜಲಾಶಯದಲ್ಲಿ 1,632.48 ಅಡಿಯಷ್ಟು ನೀರು ಸಂಗ್ರಹವಾಗಿದ್ದು, 1,633 ಅಡಿ ಸಾಮರ್ಥ್ಯವನ್ನು ಈ ಜಲಾಶಯ ಹೊಂದಿದೆ. ಜಲಾಶಯ ಭರ್ತಿಯಾಗಲು ಕೇವಲ 0.52 ಅಡಿಯಷ್ಟೇ ಬಾಕಿಯಿದೆ. 27,637 ಕ್ಯೂಸೆಕ್ನಷ್ಟು ನೀರು ಈ ಜಲಾಶಯಕ್ಕೆ ಹರಿದು ಬಂದಿದ್ದು, ಬೆಳಗ್ಗೆ ಜಲಾಶಯದ 10 ಕ್ರಸ್ಟ್ ಗೇಟ್ಗಳ ಮೂಲಕ ಸುಮಾರು 24,700 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ.
ಅಂದಾಜು 1.5 ಅಡಿಯಷ್ಟು ನೀರನ್ನು ಹತ್ತು ಕ್ರಸ್ಟ್ ಗೇಟ್ಗಳ ಮೂಲಕ ಹರಿಬಿಡಲಾಗಿದೆ. ಹೀಗಾಗಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಜಲಾಶಯ ಮಂಡಳಿ ಕೋರಿದೆ.