ETV Bharat / state

ಹೊಸಪೇಟೆಯಲ್ಲಿ ಲಾರಿ-ಕಾರು ಅಪಘಾತ: ಇಬ್ಬರ ದುರ್ಮರಣ - ಮರಿಯಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ-50

ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತವಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ.

hosapete
ಲಾರಿ-ಕಾರು ಅಪಘಾತ
author img

By

Published : Apr 12, 2021, 8:48 AM IST

ಹೊಸಪೇಟೆ: ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ಮರಿಯಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ನಡೆದಿದೆ.

ಕಾರಿನಲ್ಲಿದ್ದ ಸಿಂಧನೂರ ಮೂಲದ ಪವನ್ ಕುಮಾರ್ ಜಿಂಕಾ ಮತ್ತು ಅಂಬರೀಶ್ ಮೃತರು. ಲಾರಿಯು ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಇನ್ನು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.