ಬಳ್ಳಾರಿ: ಜಿಲ್ಲೆಯಾದ್ಯಂತ ಮಂಗಳವಾರ ಸಂಜೆ ಗುಡುಗು ಸಹಿತ ಮಳೆಯಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಸಂಡೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೊಮ್ಮಲಗುಂಡ ಗ್ರಾಮದ ನಾಗಪ್ಪ (70) ಹಾಗೂ ನಾಗೇನಹಳ್ಳಿಯ ಜಾಜರ್ ಕಲ್ಲು ತಿಮ್ಮಣ್ಣ (70) ಮೃತರು. ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದೆ. ಈ ವೇಳೆ ನಾಗಪ್ಪ ಅವರ ಮೇಕೆಯೂ ಸಿಡಿಲಿಗೆ ಬಲಿಯಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಸಂಜೆ ಸಂಡೂರು ಪಟ್ಟಣ ಹಾಗೂ ಚೋರನೂರು ಹೋಬಳಿಯಲ್ಲಿ ಉತ್ತಮ ಮಳೆಯಾಗಿದೆ. ಕೃಷಿ ಹಾನಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಳ್ಳಾರಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮನೆ ಹಾಗೂ ಜಮೀನುಗಳಿಗೆ ನೀರು ನುಗ್ಗಿದೆ. ಮನೆಯಲ್ಲಿನ ನೀರನ್ನು ಹೊರಹಾಕಲು ರೂಪನಗುಡಿ ರಸ್ತೆ, ವಡ್ಡರಬಂಡೆ, ಬಳ್ಳಾರಪ್ಪ ಕಾಲೋನಿಯ ಜನ ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ: ಸಿಡಿಲು ಬಡಿದು ನಾಲ್ವರು ಕಾರ್ಮಿಕರು ಸಾವು