ETV Bharat / state

ಬಳ್ಳಾರಿಯಲ್ಲಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿ; ಸಾವಿನ ಸಂಖ್ಯೆ 7ಕ್ಕೇರಿಕೆ

author img

By

Published : Jun 24, 2020, 1:05 PM IST

ದಿನದಿಂದ ದಿನಕ್ಕೆ ಗಣಿನಾಡಿನ ಜನತೆಯಲ್ಲಿ ಆತಂಕ ಹೆಚ್ಚುತ್ತಿದೆ. ನಿನ್ನೆ ಕೊರೊನಾ ಮಹಾಮಾರಿಗೆ ಇಬ್ಬರು ಸಾವನ್ನಪ್ಪಿದ್ದರು. ಆದ್ರೆ ಇಂದು ಕೂಡಾ ಕೊರೊನಾ ಇಬ್ಬರನ್ನು ಬಲಿ ಪಡೆದಿದೆ.

death by corona, Two more person death by corona, Two more person death by corona in Bellary, Bellary corona death, bellary corona death news, ಕೊರೊನಾದಿಂದ ಸಾವು, ಬಳ್ಳಾರಿಯಲ್ಲಿ ಇಬ್ಬರು ಕೊರೊನಾದಿಂದ ಸಾವು, ಬಳ್ಳಾರಿ ಕೊರೊನಾ ಸಾವು, ಬಳ್ಳಾರಿ ಕೊರೊನಾ ಸಾವು ಸುದ್ದಿ,
ಗಣಿನಾಡಲ್ಲಿ ಕೊರೊನಾಗೆ ಏಳನೇ ಬಲಿ

ಬಳ್ಳಾರಿ: ಗಣಿಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 7ಕ್ಕೇರಿದೆ.

ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗದ ನಿವಾಸಿ 28 ವರ್ಷದ ಯುವಕ ಹಾಗೂ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದ ನಿವಾಸಿ 59 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಜೂನ್ 18ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮೃತ ಯುವಕ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಯುವಕ ಸಾವಿನ ಬಳಿಕ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿದೆ.

59 ವರ್ಷದ ವ್ಯಕ್ತಿ ಸಹ ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಪರೀಕ್ಷೆ ನಡೆಸಿದ್ದಾಗ ಇವರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಕೊರೊನಾ ಮಹಾಮಾರಿಗೆ ನಿನ್ನೆಯೂ ಇಬ್ಬರು ಬಲಿಯಾಗಿದ್ದು, ಇಂದು ಮತ್ತಿಬ್ಬರು ಸಾವನ್ನಪ್ಪಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.