ಬಳ್ಳಾರಿ: ಬಹಿರ್ದೆಸೆಗೆ ಹೋಗುತ್ತಿದ್ದ ಇಬ್ಬರು ಯುವತಿಯರು ರೈಲಿಗೆ ಸಿಲುಕಿ ಮೃತ ಪಟ್ಟಿರುವ ಘಟನೆ ತಾಲೂಕಿನ ತೆಗ್ಗಿನ ಬೂದಿಹಾಳ್ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
ಪ್ರಭಾವತಿ (16) ಮತ್ತು ಸ್ವಾತಿ(21) ಮೃತರು. ಇವರಿಬ್ಬರು ಅಕ್ಕಪಕ್ಕದ ಮನೆಯವರಾಗಿದ್ದು, ಸಂಜೆ ಬಹಿರ್ದೆಸೆಗೆ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ದುರಂತ ಸಂಭವಿಸಿದೆ.
ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹೆಣ್ಣುಮಕ್ಕಳು ಶೌಚಾಲಯ ಬಳಸದೇ ಬಯಲು ಬಹಿರ್ದೆಸೆಗೆ ಹೋದರೆ ಏನೂ ಮಾಡೋಕೆ ಆಗಲ್ಲ: ಸಚಿವ ಈಶ್ವರಪ್ಪ