ಬಳ್ಳಾರಿ : ಲಾಕ್ಡೌನ್ನಿಂದಾಗಿ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜನಿ ಪೀಠದ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನ ರದ್ದುಗೊಳಿಸಲಾಗಿದೆ.
ಮಂಗಳವಾರ ಸಂಜೆ 5 ಗಂಟೆಗೆ ಜಾತ್ರಾ ಮಹೋತ್ಸವ ನಡೆಯಬೇಕಿತ್ತು, ಅಪಾರ ಪ್ರಮಾಣದ ಭಕ್ತರು ಪಾಲ್ಗೊಳ್ಳುವುದರಿಂದ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗದ ಹಿನ್ನೆಲೆ ಈ ಜಾತ್ರಾ ಮಹೋತ್ಸವವನ್ನು ರದ್ದುಗೊಳಿಸಿ ಉಜ್ಜನಿ ಪೀಠದ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಶ್ರೀ ಮಠದ ಭಕ್ತರು ತಮ್ಮ ತಮ್ಮ ಮನೆಗಳಲ್ಲೇ ಮರುಳ ಸಿದ್ದೇಶ್ವರನನ್ನು ಆರಾಧಿಸುವಂತೆ ಸಿದ್ದಲಿಂಗ ರಾಜ ದೇಶಿ ಕೇಂದ್ರ ಶಿವಾಚಾರ್ಯ ಮಹಾ ಭಗವತ್ಪಾದರು ಮನವಿ ಮಾಡಿದ್ದಾರೆ.